ಸಂಬಂಧಿಕರ ಮದುವೆಯಲ್ಲಿ ಡ್ಯಾನ್ಸ್ ಮಾಡುವ ಸಂದರ್ಭ ಹೃದಯಾಘಾತಕ್ಕೊಳಗಾಗಿ ಯುವಕ ಸಾವನ್ನಪ್ಪಿದ ಘಟನೆ ವಿಜಯಪುರ ನಗರದ ಚಪ್ಪರಬಂದ ಕಾಲೋನಿಯಲ್ಲಿ ನಡೆದಿದೆ.
ಮಹಮ್ಮದ್ ಪೈಗಂಬರ್ ಗಂಗನಹಳ್ಳಿ (28) ಹೃದಯಾಘಾತದಿಂದ ಮೃತಪಟ್ಟ ಯುವಕ. ಆಲ್ಯೂಮೀನಿಯಂ ಕಿಟಕಿ, ಬಾಗಿಲು ಕೆಲಸ ಮಾಡುತ್ತಿದ್ದ. ಸಂಬಂಧಿಕರ ಮದುವೆಯಲ್ಲಿ ಡ್ಯಾನ್ಸ್ ಮಾಡುವಾಗ ಏಕಾಏಕಿ ಹೃದಯಾಘಾತಕ್ಕೊಳಗಾಗಿ ಕುಸಿದು ಬಿದ್ದಿದ್ದಾನೆ.
ಅಮ್ಮಾ, ನಾನು ಚಿಪ್ಸ್ ಕದ್ದಿಲ್ಲಮ್ಮಾ – ಅವಮಾನಗೊಂಡಿದ್ದರಿಂದ ಡೆತ್‌ನೋಟ್ ಬರೆದು 7ನೇ ಕ್ಲಾಸ್ ವಿದ್ಯಾರ್ಥಿ ಆತ್ಮಹತ್ಯೆ
ಕೂಡಲೇ ಯುವಕನನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅಷ್ಟುಹೊತ್ತಿಗಾಗಲೇ ಆತನ ಪ್ರಾಣಪಕ್ಷಿ ಹಾರಿಹೋಗಿತ್ತು. ಗೋಳಗುಮ್ಮಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.