ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಯುವವಾಹಿನಿ ಡೆನ್ನಾನ ಡೆನ್ನನ ಸಾಂಸ್ಕೃತಿಕ ಸ್ಪರ್ಧೆಗೆ ಚಾಲನೆ
ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಎಪ್ರಿಲ್ 19 ರಂದು ಸ್ಪರ್ಶ ಕಲಾ ಮಂದಿರ ಬಿ.ಸಿ.ರೋಡ್ ಇಲ್ಲಿ ಯುವವಾಹಿನಿ ಅಂತರ್ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026 ನಡೆಯಿತು.
ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಭುವನೇಶ್ ಪಚ್ಚಿನಡ್ಕ ಇವರು ದೀಪ ಬೆಳಗುವುದರ ಮೂಲಕ ಸಮಾರಂಭ ಉದ್ಘಾಟಿಸಿ
ಮಾತನಾಡಿದರು. “ನಮ್ಮ ಪೂರ್ವಜರು ಉಳಿಸಿಕೊಟ್ಟ ಜಾನಪದ ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ದಾಟಿಸುವ ಜವಾಬ್ದಾರಿ ಯುವಜನತೆಯ ಮೇಲಿದೆ. ಸ್ಪರ್ಧಾತ್ಮಕ ಮನೋಭಾವದ ಜೊತೆಗೆ ನಮ್ಮತನವನ್ನು ಉಳಿಸಿಕೊಳ್ಳುವ ಹಂಬಲ ಈ ಕಾರ್ಯಕ್ರಮದಲ್ಲಿ ಎದ್ದು ಕಾಣುತ್ತಿದೆ, ಈ ನಿಟ್ಟಿನಲ್ಲಿ ಯುವವಾಹಿನಿ ನಮ್ಮ ಸಂಸ್ಕ್ರತಿ ಬೆಳಗಿಸುವ ದಾರಿದೀಪ
ಎಂದು ಅವರು ಆಶಯ ವ್ಯಕ್ತಪಡಿಸಿದರು.
ಯುವವಾಹಿನಿ ಆಯೋಜಿಸುವ ‘ಡೆನ್ನಾನ ಡೆನ್ನಾನ’ ಕಾರ್ಯಕ್ರಮವು ಕೇವಲ ಒಂದು ಸ್ಪರ್ಧೆಯಲ್ಲ, ಅದು ತುಳುನಾಡಿನ ಮಣ್ಣಿನ ಸಂಸ್ಕೃತಿಯನ್ನು ಜಗತ್ತಿಗೆ ಪರಿಚಯಿಸುವ ಒಂದು ಅದ್ಭುತ ವೇದಿಕೆಯಾಗಿದೆ ಎಂದು ಡೆನ್ನಾನ ಡೆನ್ನನ ಸ್ಪರ್ಧೆಗೆ ಚಾಲನೆ ನೀಡಿ ಮಾತನಾಡಿದ ಪಡುಮಲೆ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಹರಿಕೃಷ್ಣ ಬಂಟ್ವಾಳ್ ಅವರು ಅಭಿಪ್ರಾಯಪಟ್ಟರು.
ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಅಶೋಕ್ ಕುಮಾರ್ ಪಡ್ಪು ಧ್ವಜಾರೋಹಣ ಮಾಡಿದರು.
ಯುವವಾಹಿನಿ (ರಿ.) ಬಂಟ್ವಾಳ ಘಟಕದ ಅಧ್ಯಕ್ಷ ನಾಗೇಶ್ ಪೂಜಾರಿ ನೈಬೇಲು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು
ಗೆಜ್ಜೆಗಿರಿ ನಂದನಬಿತ್ತ್ಲ್ ಕ್ಷೇತ್ರದ ಅಧ್ಯಕ್ಷರಾದ ಸಂಜೀವ ಪೂಜಾರಿ ಬಿರ್ವ, ಬೆಹರ್ರೈನ್ ಕನ್ಮಡ ಸಂಘದ ಅಧ್ಯಕ್ಷರಾದ ಅಜಿತ್ ಬಂಗೇರ, ಗುಜರಾತ್ ಬಿಲ್ಲವ ಸಂಘದ ನಿಕಟಪೂರ್ವ ಅಧ್ಯಕ್ಷರಾದ, ಕೌಡೋಡಿ ವಿಶ್ವನಾಥ ಪೂಜಾರಿ, ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಉಪಾಧ್ಯಕ್ಷ ಜಯಪ್ರಕಾಶ್ ಜೆ. ಎಸ್. ಬಂಟ್ವಾಳ ತಾಲೂಕು ಬಿಲ್ಲವ ಮಹಿಳಾ ಸಮಿತಿಯ ಅಧ್ಯಕ್ಷೆ
ರಾಗಿಣಿ ಮಾಧವ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು
900 ಕ್ಕೂ ಅಧಿಕ ಕಲಾವಿದರು, ಬೆಂಗಳೂರು, ಉಡುಪಿ ಸೇರಿದಂತೆ ಯುವವಾಹಿನಿ ಸಂಸ್ಥೆಯ 17 ಘಟಕಗಳು ಈ ಸಾಂಸ್ಕೃತಿಕ ಹಬ್ಬದಲ್ಲಿ ಭಾಗವಹಿಸಿದ್ದರು
ಈ ಸಂದರ್ಭದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ರೇಖಾ ಗೋಪಾಲ್, ಸಾಂಸ್ಕೃತಿಕ ನಿರ್ದೇಶಕ ದಿನೇಶ್ ಸುವರ್ಣ ರಾಯಿ, ಯುವವಾಹಿನಿ ಬಂಟ್ವಾಳ ಘಟಕದ ಕಾರ್ಯದರ್ಶಿ ಮಧುಸೂದನ್ ಮದ್ವ, ಸಾಂಸ್ಕೃತಿಕ ನಿರ್ದೇಶಕ ಶೈಲೇಶ್ ಪೂಜಾರಿ ಕುಚ್ಚಿಗುಡ್ಡೆ, ಕಾರ್ಯಕ್ರಮದ ಪ್ರಧಾನ ಸಂಚಾಲಕ ಶ್ರೀನಿವಾಸ ಪೂಜಾರಿ ಮೆಲ್ಕಾರ್, ಸಂಚಾಲಕರಾದ ಗೀತಾ ಜಗದೀಶ್, ಉದಯ ಪೂಜಾರಿ ಮೇನಾಡು ಉಪಸ್ಥಿತರಿದ್ದರು
ಯುವವಾಹಿನಿ ಬಂಟ್ವಾಳ ಘಟಕದ ಅಧ್ಯಕ್ಷ ನಾಗೇಶ್ ಪೂಜಾರಿ ನೈಬೇಲು ಸ್ವಾಗತಿಸಿದರು, ಕಾರ್ಯದರ್ಶಿ ಮಧುಸೂದನ್ ಮದ್ವ ಧನ್ಯವಾದ ನೀಡಿದರು
ರೇಣುಕಾ ಕಣಿಯೂರು ಕಾರ್ಯಕ್ರಮ ನಿರೂಪಿಸಿದರು
